ಹೊಸಪೇಟೆ: ಧರ್ಮದ ಗುಡ್ಡದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
Update: 2025-08-14 10:13 IST
ವಿಜಯನಗರ: ಹೊಸಪೇಟೆ ತಾಲೂಕಿನ ಧರ್ಮದ ಗುಡ್ಡದ ಬಳಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಕಳೆದ ವಾರವೂ ಈ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು, ಈಗ ಮತ್ತೆ ಚಿರತೆ ಪ್ರತ್ಯಕ್ಷವಾಗಿ ಗುಡ್ಡದ ಮೇಲಿನ ಕಲ್ಲು ಬಂಡೆಯ ಮೇಲೆ ಕುಳಿತಿದೆ.
ಇದರಿಂದ ಗ್ರಾಮದ ಜನರಲ್ಲಿ ಭಯದ ವಾತಾವರಣ ಉಂಟಾಗಿದೆ ಎಂದು ವರದಿಯಾಗಿದೆ.