ಗಾದಿಗನೂರು ಸಿಲಿಂಡರ್ ಸ್ಪೋಟ ಪ್ರಕರಣ: ಗಾಯಾಳುಗಳ ಭೇಟಿಯಾದ ಸಚಿವ ಝಮೀರ್ ಅಹ್ಮದ್
Update: 2025-09-29 22:58 IST
ವಿಜಯನಗರ (ಹೊಸಪೇಟೆ): ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಲಿಂಡರ್ ಸ್ಪೋಟ ಘಟನೆಯಲ್ಲಿ ಗಾಯಗೊಂಡವರನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಭೇಟಿ ಪರಿಶೀಲಿಸಿದರು.
ಬಳಿಕ ಮಾತನಾಡಿದ ಅವರು, ಇಂತಹ ದುರ್ಘಟನೆ ನಡೆಯಬಾರದಿತ್ತು. ಅದರಲ್ಲೂ ಎರಡು ವರ್ಷದ ಮಗುವಿಗೆ ಶೇ.70 ರಷ್ಟು ಸುಟ್ಟ ಗಾಯವಾಗಿದೆ. ನೋಡಿ ದುಃಖವಾಗಿದೆ. ಇವರೆಲ್ಲರಿಗೂ ಸೂಕ್ತ ಆರೋಗ್ಯ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಸೂಕ್ತ ಕ್ರಮ ವಹಿಸಲಾಗಿದೆ. ಶೀಘ್ರ ಗುಣಮುಖರಾಗಿ ಬರಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ. ಸದ್ಯಕ್ಕೆ ಸ್ಥಳೀಯ ತಹಶೀಲ್ದಾರರಿಗೆ ಚಿಕಿತ್ಸೆ ನಿಗಾ ವಹಿಸಲು ಸೂಚಿಸಲಾಗಿದೆ. ಎಲ್ಲಾ ರೀತಿಯ ಸೌಕರ್ಯ ನೀಡಲಾಗುವುದು ಎಂದರು.
ಈ ವೇಳೆ ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಇದ್ದರು.