×
Ad

ಶಕ್ತಿ ಯೋಜನೆಯಡಿ 500 ಕೋಟಿ ಮಂದಿ ಪ್ರಯಾಣ : ವಿಜಯನಗರದಲ್ಲಿ ಸಂಭ್ರಮಾಚರಣೆ

Update: 2025-07-14 21:00 IST

ವಿಜಯನಗರ(ಹೊಸಪೇಟೆ) : ಶಕ್ತಿ ಯೋಜನೆಯಡಿ ರಾಜ್ಯಾದ್ಯಾಂತ 500 ಕೋಟಿ ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿರುವುದು ಸ್ತ್ರಿ ಸ್ವಾವಲಂಬಿ ಕನಸುಗಳನ್ನು ನನಸಾಗಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದರು.

ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಶಕ್ತಿ ಯೋಜನೆಯಡಿಯಲ್ಲಿ 500 ಕೋಟಿ ಉಚಿತ ಟಿಕೆಟ್‌ಗಳನ್ನು ವಿತರಿಸಿದ ಸಂಭ್ರಮಾಚಾರಣೆಯಲ್ಲಿ ಭಾಗವಹಿಸಿ ಅವರು ಸೋಮವಾರ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಯಲ್ಲಿ ಪ್ರಮುಖವಾಗಿ ಮಹಿಳೆಯರನ್ನು ಕೇಂದ್ರವಾಗಿಸಿ ಉಚಿತವಾಗಿ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ನೀಡಿದ್ದ ಭರವಸೆ ಎರಡು ವರ್ಷಗಳ ಕಾಲ ಯಶಸ್ವಿಯಾಗಿ ನಡೆಯುತ್ತ ಬಂದಿದೆ. ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಟ್ಟು 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು, ಪ್ರಯಾಣದ ಒಟ್ಟು ಮೊತ್ತ 12,669 ಕೋಟಿ ರೂ. ಗಳು ಶಕ್ತಿ ಯೋಜನೆಗೆ ಈವರೆಗೆ ವಿನಿಯೋಗಿಸಲಾಗಿದೆ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಮಾತನಾಡಿದರು.

ಈ ವೇಳೆ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದ ನಿಯಾಂತ್ರಣಾಧಿಕಾರಿ ತಿಮ್ಮಾರೆಡ್ಡಿ ಹೀರಾ, ವಿಭಾಗೀಯ ತಾಂತ್ರಿಕ ಅಧಿಕಾರಿ ಜಿ.ನಾಗರಾಜ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News