ವಿಜಯನಗರ: ಹಂಪಿಯು ನಾಡಿನ ಐತಿಹಾಸಿಕ ಮತ್ತು ಪ್ರಮುಖ ಸ್ಥಳವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್‌ಅನ್ನು  ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಿ, ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು.  ಹೆಚ್ಚುವರಿಯಾಗಿ 3 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಕೆ.ರಾಮಲಿಂಗಾ ರೆಡ್ಡಿ ಹೇಳಿದರು.

ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್‌ನ ನೂತನ ಮುಖ್ಯ ಪ್ರವೇಶ ದ್ವಾರ ಹಾಗೂ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ 18 ಕೋಟಿ ರೂ. ಅನುದಾನದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೆರಿಸಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಪ್ರವಾಸಿಗರ ಪಾರ್ಕ್ ಸಫಾರಿ ಅನುಕೂಲಕ್ಕಾಗಿ ಹೊಸ ಓಪನ್ ಜೀಪ್, ಕ್ಲೋಜ್ಡ್ ಜೀಪ್, ಬಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ, ಆಸಕ್ತರಿಗೆ ಪಾರ್ಕ್ ಬಗ್ಗೆ, ಪ್ರಾಣಿಗಳ-ಪಕ್ಷಿಗಳ ಬಗ್ಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರ ತೆರೆಯಲಾಗಿದೆ ಎಂದು ತಿಳಿಸಿದರು.

ಆನೆಗಳನ್ನು ಭದ್ರಾ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಕುರಿತು ಹಿಂದಿನಿಂದಲೂ ಚರ್ಚೆಗಳು ನಡೆಯುತ್ತಿವೆ. ಜನಪ್ರತಿನಿಧಿಗಳೂ ಈ ವಿಚಾರವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಆನೆಗಳ ಹಾವಳಿಯಿಂದ ಜನರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಆತಂಕವನ್ನೂ ಸರಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದರು.

ಹೊಸಪೇಟೆ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ, ಬಳ್ಳಾರಿ ಲೋಕಸಭೆ ಸಂಸದರಾದ ಈ.ತುಕಾರಾಮ್, ಹರಪನಹಳ್ಳಿ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಮೂರ್ತಿ ಕೆ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆಯ ಮುಖ್ಯಸ್ಥರಾದ ರವಿ.ಬಿ.ಪಿ., ಬಳ್ಳಾರಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ನಾಯಕ ಕೆ., ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಎಸ್.ಪಿ ಎಸ್.ಜಾಹ್ನವಿ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ರವಿಶಂಕರ ಎಸ್.ಎಸ್., ವಿಜಯನಗರ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಬಂಡಿಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯ ಸೇನ್, ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಾಜೇಶ್ ನಾಯ್ಕ್. ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸಂತೋಷ ನಾಯಕ್, ಸುರೇಶ, ಗೋಪೆ ನಾಯಕ್ ಜಿ, ಹರ್ಷವರ್ಧನ, ವಲಯ ಅರಣ್ಯ ಅಧಿಕಾರಿ ಭರತ ಎಂ.ಎ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರ್ಷ ಡಿ.ಎಲ್, ಆರ್ ಎಫ್‌ಓ ರಮೇಶ ಜಿ, ಸೇರಿದಂತೆ ಸರಣ್ಯ ಇಲಾಖೆಯ ಅನೇಕ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor