×
Ad

ಕೊಟ್ಟೂರು | ಕಳಪೆ ಕೀಟನಾಶಕ ಮಾರಾಟ ಆರೋಪ: ಅಧಿಕಾರಿಗಳ ಭೇಟಿ, ಪರಿಶೀಲನೆ

Update: 2026-07-13 20:34 IST

​ಕೊಟ್ಟೂರು (ವಿಜಯನಗರ) ಪಟ್ಟಣದ ರಸಗೊಬ್ಬರ ಮಳಿಗೆಯೊಂದರಲ್ಲಿ ಕಲಬೆರಕೆ ಹಾಗೂ ಕಳಪೆ ಗುಣಮಟ್ಟದ ಕೀಟನಾಶಕಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸ್ಥಳೀಯ ರೈತರು ಕೃಷಿ ಇಲಾಖೆಗೆ ದೂರು ನೀಡಿದ್ದರು.

​ರೈತರ ದೂರಿನ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾದ ಕೊಟ್ಟೂರು ಹಾಗೂ ಕೂಡ್ಲಿಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಆರ್. ವಿ. ತೇಜವರ್ಧನ್ ಅವರು ಸದರಿ ಮಳಿಗೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಂಗಡಿಯಲ್ಲಿದ್ದ ಕೀಟನಾಶಕಗಳ ಮಾದರಿಯನ್ನು (Samples) ಸಂಗ್ರಹಿಸಿ, ಹೆಚ್ಚಿನ ತಪಾಸಣೆಗಾಗಿ ಪ್ರಯೋಗಾಲಯಕ್ಕೆ (Lab) ಕಳುಹಿಸಿಕೊಡಲಾಗಿದೆ.

​ಪ್ರಯೋಗಾಲಯದ ವರದಿ ಬರುವವರೆಗೆ ಸದರಿ ಕೀಟನಾಶಕಗಳನ್ನು ರೈತರಿಗೆ ಮಾರಾಟ ಮಾಡಬಾರದು ಎಂದು ಕೃಷಿ ಅಧಿಕಾರಿಗಳು ಮಳಿಗೆಯ ಮಾಲಕರಿಗೆ 'ಸ್ಟಾಪ್ ಸೇಲ್ ನೋಟಿಸ್' (Stop sale notice) ಜಾರಿ ಮಾಡಿದ್ದಾರೆ.

​"ರೈತರಿಗೆ ಕಳಪೆ ಕೀಟನಾಶಕ ಅಥವಾ ರಸಗೊಬ್ಬರ ಮಾರಾಟ ಮಾಡಿ ವಂಚಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಪ್ರಯೋಗಾಲಯದ ವರದಿ ಬಂದ ನಂತರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು," ಎಂದು ಸಹಾಯಕ ಕೃಷಿ ನಿರ್ದೇಶಕರಾದ ಆರ್. ವಿ. ತೇಜವರ್ಧನ್ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News