×
Ad

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಾಖಲಾತಿ ಪ್ರಾರಂಭ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2024-10-19 12:31 IST

ಸಾಂದರ್ಭಿಕ ಚಿತ್ರ

ಹೊಸಪೇಟೆ : 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಕ್ಕಾಗಿ ಮರಿಯಮ್ಮನಹಳ್ಳಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಾಖಲಾತಿ ಪ್ರಾರಂಭವಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 75 ರಷ್ಟು (ಮುಸ್ಲಿಂ, ಕ್ರೈಸ್ತ, ಸಿಖ್, ಜೈನ್, ಬೌದ್ಧ ಹಾಗೂ ಪಾರ್ಸಿ) ಹಾಗೂ ಇನ್ನುಳಿದ 25 ರಷ್ಟು ಸೀಟುಗಳು ಹಿಂದುಳಿದ ವಿದ್ಯಾರ್ಥಿಗಳಿಗೆ ಮೀಸಲಿದ್ದು, ಆಸಕ್ತ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ. ಮರಿಯಮ್ಮನಹಳ್ಳಿ ಸಮುದಾಯ ಭವನ ಇಂದಿರಾನಗರ, ಢಣಾಯಕನಕೆರೆ, ಮರಿಯಮ್ಮನಹಳ್ಳಿ ಇಲ್ಲಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ದಾಖಲಾದ ವಿದ್ಯಾರ್ಥಿಗಳಿಗೆ ವಸತಿಯುತ ಉಚಿತ ಶಿಕ್ಷಣ ನೀಡಲಾಗುವುದು ಎಂದು ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News