ಹೊಸಪೇಟೆ/ವಿಜಯನಗರ: ರವಿ ಹಂಜ್ ಬರೆದಿರುವ ‘ಬಸವಮಂಟಪ’ ಪುಸ್ತಕಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ವಿವಿಧ ಬಸವಪರ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಹೊಸಪೇಟೆ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪುಸ್ತಕದ ವಿಚಾರವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಅವರ ಭಾವಚಿತ್ರಗಳಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

ಬಸವಪರ ಸಂಘಟನೆಗಳ ಮುಖಂಡರು, ದಲಿತ ಸಂಘಟನೆಗಳ ಪದಾಧಿಕಾರಿಗಳು, ಪ್ರಗತಿಪರ ಚಿಂತಕರು ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನೆಯಲ್ಲಿ ಬಣ್ಣದ ಮನೆ ಸೋಮಶೇಖರ್, ಇಮಾಮ್ ನಿಯಾಜಿ, ಖಾಜಾ ಹುಸೇನ್ ನಿಯಾಜಿ, ಸಂತೋಷ್, ಗುಜ್ಜಲ್ ಗಣೇಶ್, ಪಿ.ವಿ. ವೆಂಕಟೇಶ್, ಸ್ಲಂ ವೆಂಕಟೇಶ್, ಎಲ್. ಮಂಜುನಾಥ್, ಚಂದ್ರಬಾಬು, ಉಮಾ ಮಹೇಶ್ವರ, ಸಣ್ಣಮಾರೆಪ್ಪ, ನಂದೀಶ್ವರ ದಂಡೆ, ಅಕ್ಕಿ ಮಲ್ಲಿಕಾರ್ಜುನ, ಎಂ.ಕೆ. ಹನುಮಂತಪ್ಪ ಸೇರಿದಂತೆ ಜಾಗತಿಕ ಲಿಂಗಾಯತ ಸಮುದಾಯದ ಅಧ್ಯಕ್ಷರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ವಿಜಯನಗರ ಜಿಲ್ಲಾ ವರದಿಗಾರರು

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ