ವಿಜಯನಗರ(ಹೊಸಪೇಟೆ): ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಜಯಂತಿ ಪ್ರಯುಕ್ತ ಎಸೆಸೆಲ್ಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿಧಾರ್ಥಿ ಆಕಾಶ್ ಬ್ಯಾಲ ಹುಣಸಿ ಅವರಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 1ಲಕ್ಷ ರೂ. ಧನ ಸಹಾಯ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೈಕಿ ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಬಿ ದರ್ಜೆಯ ಹುದ್ದೆಗೆ ಆಯ್ಕೆಯಾದ ಈರಣ್ಣ ಹಾಗೂ  ಐಐಟಿ ಕಾಲೇಜುಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ನಗರಸಭೆ ಪೌರಾಯುಕ್ತ ಶಿವಕುಮಾರ್, ಡಿವೈಎಸ್ಪಿ ಮುರಳೀಧರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಗಂಗಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಶಿಕಲಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿಕುಮಾರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor