×
Ad

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ | ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆ : ಸಿಎಂ ಸಿದ್ದರಾಮಯ್ಯ

Update: 2025-01-12 17:29 IST

ಸಿದ್ದರಾಮಯ್ಯ

ವಿಜಯನಗರ :ʼಚಾಮರಾಜಪೇಟೆಯಲ್ಲಿ ಹಸುಗಳಿಗೆ ಹಿಂಸೆ ನೀಡಿರುವ ಘಟನೆ ಅತ್ಯಂತ ಅಮಾನವೀಯ. ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆಹಚ್ಚಿ ಖಂಡಿತಾ ಶಿಕ್ಷೆಗೆ ಒಳಪಡಿಸಲಾಗುವುದುʼ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯನಗರದಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಈ ವರೆಗೆ ಕೃತ್ಯ ಎಸಗಿದವರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರಿಗೆ ತಪ್ಪಿತಸ್ಥರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಕಾನೂನು ತನ್ನ ಕಾರ್ಯ ಮಾಡುತ್ತಿರುವ ಹೊರತಾಗಿಯೂ ಹಿಂದೂ ಸಂಘಟನೆಗಳ ಪ್ರತಿಭಟನೆ ಮಾಡುತ್ತಿರುವುದು ರಾಜಕೀಯ ಪ್ರೇರಿತವಾಗಿದೆʼ ಎಂದರು.

ʼಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯ ಬಗ್ಗೆ ಪರ - ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದುʼ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News