ಹೂವಿನಹಡಗಲಿ: ಸಂವಿಧಾನದ ಮಹತ್ವ, ಆಶಯ ಹಾಗೂ ಮೌಲ್ಯಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಗೌರವ ದಿನಾಚರಣೆಯ ಪ್ರಯುಕ್ತ ಪಟ್ಟಣದಲ್ಲಿ ಬೈಕ್ ರ‍್ಯಾಲಿ ಆಯೋಜಿಸಲಾಗಿತ್ತು.

ಪಟ್ಟಣದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಿಂದ ಆರಂಭವಾದ ಬೈಕ್ ರ‍್ಯಾಲಿಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಶ್ರೀ ಜಗದ್ಗುರು ಶಿವಶಾಂತವೀರ ಸಮುದಾಯ ಭವನದವರೆಗೆ ಸಾಗಿತು. ರ‍್ಯಾಲಿಯಲ್ಲಿ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಹೂವಿನಹಡಗಲಿ ಶಾಸಕ ಕೃಷ್ಣ ನಾಯ್ಕ್, ಮಾಜಿ ಸಚಿವ ಎನ್. ಮಹೇಶ್, ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರಿ ಹನುಮಂತು, ವಿಭಾಗ ಪ್ರಭಾರಿ ಚನ್ನಬಸವನಗೌಡ ಪಾಟೀಲ್, ವಿಜಯನಗರ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಬ್ಯಾಲಹುನಸಿ ರಾಮಣ್ಣ, ತಾಲೂಕು ಮಂಡಲ ಅಧ್ಯಕ್ಷ ಪೂಜಾರ್ ಮಲ್ಲಿಕಾರ್ಜುನ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ವಿಜಯನಗರ ಜಿಲ್ಲಾ ವರದಿಗಾರರು

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ