×
Ad

ವಿಜಯನಗರದಲ್ಲಿ ಅಡುಗೆ ಸಿಲಿಂಡರ್ ಸ್ಫೋಟ ಪ್ರಕರಣ | ಸರಕಾರದಿಂದ ತಲಾ 5 ಲಕ್ಷ ರೂ. ಪರಿಹಾರ : ಸಚಿವ ಝಮೀರ್ ಅಹ್ಮದ್

Update: 2025-10-03 19:32 IST

ಬೆಂಗಳೂರು : ವಿಜಯನಗರ ಜಿಲ್ಲೆ ಹೊಸಪೇಟೆಯ ಗಾದಿಗನೂರಿನಲ್ಲಿ ಅಡುಗೆ ಅನಿಲ ಸ್ಫೋಟಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಪೈಕಿ ಇಬ್ಬರು ಮೃತಪಟ್ಟಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹಮದ್ ಖಾನ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, ಸರಕಾರದ ಪರವಾಗಿ ಮೃತರಾದ ಹಾಲಪ್ಪ ಹಾಗೂ ಗಂಗಮ್ಮ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು. ಸ್ಫೋಟ ಘಟನೆಯಿಂದ ಮನೆಗೆ ಹಾನಿಯಾಗಿದ್ದು, ವೈಯಕ್ತಿಕ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲಾಗುವುದು ಎಂದು ಝಮೀರ್ ಅಹ್ಮದ್ ಖಾನ್ ಭರವಸೆ ನೀಡಿದರು.

ಅನಂತರ ಆಂಬುಲೆನ್ಸ್ ಮೂಲಕ ಮೃತರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಿಕೊಟ್ಟರು. ಅಲ್ಲದೆ, ಮೃತರ ಅಂತ್ಯಕ್ರಿಯೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಲು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮಣ್ಣಿಕೇರಿ ಅವರಿಗೆ ದೂರವಾಣಿ ಮೂಲಕ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಸೂಚನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News