ಸೆ.19ರಂದು ವಿಜಯನಗರದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ
ಹೊಸಪೇಟೆ: ನಗರದ ಡ್ಯಾಂ ರಸ್ತೆಯಲ್ಲಿರುವ ಸಾಯಿಬಾಬಾ ದೇವಸ್ಥಾನದ ಪಕ್ಕದಲ್ಲಿರುವ ಸಾಯಿಲೀಲಾ ರಂಗಮಂದಿರದಲ್ಲಿ ಸೆ.19ರಂದು ಬೆಳಿಗ್ಗೆ 11 ಗಂಟೆಗೆ ಶಾಲಾ ಶಿಕ್ಷಣ ಇಲಾಖೆಯಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.
ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಘನ ಹಾಜರಾತಿ ವಹಿಸಲಿದ್ದಾರೆ.
ಹೊಸಪೇಟೆ ಶಾಸಕ ಹೆಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮತ್ತು ವಿಜಯನಗರ ಸಂಸದ ಈ. ತುಕಾರಾಮ್, ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್, ಹೂವಿನಹಡಗಲಿ ಶಾಸಕ ಎಲ್. ಕೃಷ್ಣನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ. ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ್, ಶಶೀಲ್ ನಮೋಶಿ, ವೈ.ಎಂ. ಸತೀಶ್, ಹೊಸಪೇಟೆ ನಗರಸಭೆ ಅಧ್ಯಕ್ಷ ಎನ್. ರೂಪೇಶ್ ಕುಮಾರ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್. ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶಿವಮೂರ್ತಿ ಆಗಮಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಸರ್ಕಾರದ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (MSME ಮತ್ತು ಗಣಿ) ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮೀರ್ ಶುಕ್ಲಾ, ಜಿಲ್ಲಾಧಿಕಾರಿ ಕವಿತಾ.ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಕುರಿತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಉಪನಿರ್ದೇಶಕ ಜೆ.ಎಂ. ತಿಪ್ಪೇಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಹೊಸಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ ಮಾಹಿತಿ ನೀಡಿದ್ದಾರೆ.