ಹೊಸಪೇಟೆ | ಎಸ್ಸೆಸ್ಸೆಲ್ಸಿ-2 ಪರೀಕ್ಷಾ ಕೇಂದ್ರದ ಸುತ್ತ ನಿರ್ಬಂಧ ವಿಧಿಸಿದ ಜಿಲ್ಲಾಧಿಕಾರಿ
ಹೊಸಪೇಟೆ : 2024-25ನೇ ಸಾಲಿನ ಎಸೆಸೆಲ್ಸಿ-2 ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ನಿರ್ಬಂಧವನ್ನು ವಿಧಿಸಿ ಆದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ಮೇ.26 ರಿಂದ ಜೂ.2 ರವರೆಗೆ ನಡೆಯಲಿರುವ ಎಸೆಸೆಲ್ಸಿ-2 ಪರೀಕ್ಷೆಗಳು ಸುಗಮವಾಗಿ ನಡೆಯುವ ನಿಟ್ಟಿನಲ್ಲಿ 23 ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿರ್ಬಂಧವನ್ನು ವಿಧಿಸಲಾಗಿದೆ.
ನಿರ್ಬಂಧಿತ ಪ್ರದೇಶದ ವ್ಯಾಪ್ತಿಯಲ್ಲಿ ಜೆರಾಕ್ಸ್, ಸೈಬರ್ ಸೆಂಟರ್‌ಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ. ಯಾವುದೇ ಬಾಹ್ಯ, ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿನ ಮುಖ್ಯ ಅಧೀಕ್ಷಕರಿಗೆ ಅನಿವಾರ್ಯ ಸಂದರ್ಭಗಳಲ್ಲಿ ಸಂವಹನಕ್ಕಾಗಿ ಬೇಸಿಕ್ ಮೊಬೈಲ್ ಪೋನ್ ಬಳಸಲು ಮಾತ್ರ ಅನುಮತಿ ನೀಡಲಾಗಿದೆ. ಸದರಿ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಪೋನ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.