ಡಿಕೆ ಶಿವಕುಮಾರ್ ಸಿಎಂ ಆದರೆ ರಾಜ್ಯದ ಸ್ಥಿತಿ ಅಧೋಗತಿಗೆ ತಲುಪುತ್ತದೆ : ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ
ಹೊಸಪೇಟೆ : ಡಿಕೆ ಶಿವಕುಮಾರ್ ಒಂದು ವೇಳೆ ಸಿಎಂ ಆದ್ರೆ ರಾಜ್ಯ ಅಧೋಗತಿಗೆ ಹೋಗುತ್ತದೆ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಕಾಂಗ್ರೆಸ್ ನಾಯಕರ ಶಕ್ತಿ ಪ್ರದರ್ಶನ ನಡೆಯುತ್ತಿದೆ. ನಾಯಕರು ಹೋದಲ್ಲೆಲ್ಲ ನೀವೇ ಸಿಎಂ, ನೀವೇ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ. ದೇಶದಲ್ಲಿ ಕೇವಲ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಕರ್ನಾಟಕದಲ್ಲಿ ಆದಾಯ ಚೆನ್ನಾಗಿದೆ. ಅಧಿವೇಶನದಲ್ಲಿ ರೈತರು, ಖರೀದಿ ಕೇಂದ್ರ, ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಲಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಸರಕಾರದ ನಿರ್ಲಕ್ಷ್ಯದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರಕಾರ ಎಲ್ಲಾ ರೀತಿಯಲ್ಲಿ ದಿವಾಳಿ ಆಗಿದೆ. ರಷ್ಯಾದ ಅಧ್ಯಕ್ಷ ಪುಟಿನ್ ಭಾರತಕ್ಕೆ ಬಂದು ಒಪ್ಪಂದ ಮಾಡಿಕೊಂಡಿದ್ದಾರೆ. ಭಾರತ ಎಷ್ಟು ಬಲಿಷ್ಠವಾಗಿದೆ ಎಂಬುದು ಗೊತ್ತಾಗುತ್ತದೆ. ಅಮೆರಿಕವನ್ನು ಎದುರಿಸುವ ಶಕ್ತಿ ಇರುವುದು ಭಾರತಕ್ಕೆ ಮಾತ್ರ ಎಂದು ಹೇಳಿದರು.