×
Ad

ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ : ಹರಪನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

Update: 2026-06-03 20:51 IST

ಹರಪನಹಳ್ಳಿ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ (ಐ.ಬಿ.) ವೃತ್ತದಲ್ಲಿ ಎಲ್‌ಇಡಿ ಪರದಿಯ ಮೂಲಕ ಪ್ರಮಾಣ ವಚನ ಸಮಾರಂಭದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಸಮಾರಂಭ ಪೂರ್ಣಗೊಂಡ ಬಳಿಕ ಕಾರ್ಯಕರ್ತರು ಪಟಾಕಿ ಸಿಡಿಸಿ, ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಶಶಿಕುಮಾರ ನಾಯ್ಕ, ವಿವಿದೊದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕ ಎಂ.ವಿ. ಕೃಷ್ಣ, ಟಿ.ಎಚ್.ಎಂ. ಮಂಜುನಾಥ, ಯುವ ಮುಖಂಡರಾದ ಅಗ್ರಹಾರ ಅಶೋಕ, ಮತ್ತೂರು ಬಸವರಾಜ, ಶಿವಪುತ್ರ, ಅಂಜಪ್ಪ, ಪ್ರಕಾಶಗೌಡ, ಪ್ರಸಾದ್ ಕಾವಾಡಿ, ಸಾಸ್ವಿಹಳ್ಳಿ ನಾಗರಾಜ, ಓ. ಮಹಾಂತೇಶ, ಗುಡಿ ನಾಗರಾಜ, ಯಾಸಿನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News