ಕೆಂಪುಕೋಟೆ ಬಳಿ ಸ್ಫೋಟ : ವಿಜಯನಗರ ಜಿಲ್ಲೆಯಲ್ಲಿ ಹೈ ಅಲರ್ಟ್
ಯಾವುದೇ ಅನುಮಾನಾಸ್ಪದ ವ್ಯಕ್ತಿ, ವಾಹನ ಕಂಡುಬಂದಲ್ಲಿ ತಪಾಸಣೆ ಮಾಡಲಾಗುತ್ತದೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಹಾನ್ವಿ
Update: 2025-11-11 10:44 IST
ವಿಜಯನಗರ : ಜಿಲ್ಲೆಯ ಎಲ್ಲಾ ತಾಲೂಕುಗಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನಸಂದಣಿ ಪ್ರದೇಶಗಳು ಹಾಗೂ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ASC (Anti Sabotage Check) ತಂಡದೊಂದಿಗೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಲಾಡ್ಜ್, ಹೋಟೆಲ್, ಹೋಂ ಸ್ಟೇ ಸೇರಿದಂತೆ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಕೂಡ ಪರಿಶೀಲನೆ ಮುಂದುವರೆದಿದೆ. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳು ಕಂಡುಬಂದಲ್ಲಿ ತಪಾಸಣೆ ಮಾಡಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಹಾನ್ವಿ ತಿಳಿಸಿದ್ದಾರೆ.