×
Ad

ವಿಜಯನಗರ | ತೋಟಗಾರಿಕೆ ಬೆಳೆಗೆ ವಿಮೆ ನೋಂದಾವಣೆ ಅವಧಿ ವಿಸ್ತರಣೆ

Update: 2025-08-06 20:02 IST

ವಿಜಯನಗರ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಬೆಳೆಗಳಿಗೆ ವಿಮೆ ನೊಂದಾಯಿಸಲು ಆ.14ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಪಿ.ಜಿ.ಚಿದಾನಂದಪ್ಪರವರು ತಿಳಿಸಿದ್ದಾರೆ.

ಜಿಲ್ಲೆಯ ಹಡಗಲಿ, ಹಗರಿಬೊಮ್ಮನಹಳ್ಳಿ, ಹೊಸಪೇಟೆ ಮತ್ತು ಕೂಡ್ಲಿಗಿ ತಾಲೂಕಿನ ದಾಳಿಂಬೆ ಮತ್ತು ಮೆಣಸಿನಕಾಯಿ ಬೆಳೆಗಳಿಗೆ ಮತ್ತು ಹರಪನಹಳ್ಳಿ ತಾಲೂಕಿನಲ್ಲಿನ ದಾಳಿಂಬೆ ಹಾಗೂ ಅಡಿಕೆ ಬೆಳೆಗಳಿಗೆ ವಿಮೆ ನೊಂದಾಯಿಸಲು ಮತ್ತು ಸಾಲ ಪಡೆಯದ ರೈತರ ನೋಂದಣಿಗೆ ಆ.14ರಂದು ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ. ಸಾಲ ಪಡೆದ ರೈತರಿಗೆ ಆ.30ರವರೆಗೆ ಬೆಳೆ ವಿಮೆ ನೋಂದಣಿಗಾಗಿ ಅವಕಾಶ ಕಲ್ಪಿಸಲಾಗಿದೆ ಎಂದು ಪಿ.ಜಿ.ಚಿದಾನಂದಪ್ಪ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News