ಶ್ರೀ ಕೊಟ್ಟೂರೇಶ್ವರ ಮಹಾವಿದ್ಯಾಲಯದ ಐವರು ಎನ್ ಸಿಸಿ ವಿದ್ಯಾರ್ಥಿಗಳು ಭಾರತೀಯ ಸೇನೆಗೆ ಆಯ್ಕೆ
Update: 2026-06-08 19:33 IST
ವಿಜಯನಗರ : ಜಿಲ್ಲೆಯ ಕೊಟ್ಟೂರು ಪಟ್ಟಣದ ಕೊಟ್ಟೂರೇಶ್ವರ ಮಹಾವಿದ್ಯಾಲಯದ ಐವರು NCC ವಿದ್ಯಾರ್ಥಿಗಳು ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೆ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿ ಮೋಹನ ರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ ರವಿಕುಮಾರ್, ಪ್ರಶಾಂತ್ ಕುಮಾರ್ ಎಂಹೆಚ್, ಎನ್ ಸಿ ಸಿ ಅಧಿಕಾರಿಯಾದ ಲೆಫ್ಟಿನೆಂಟ್ ಬಸವರಾಜ ಬಣಕಾರ ಹಾಗೂ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.