ಅ.21 ರಂದು ಹಂಪಿ ಮೃಗಾಲಯ ಪ್ರವಾಸಿಗರ ವೀಕ್ಷಣೆಗೆ ಅವಕಾಶ
Update: 2025-10-17 23:22 IST
ವಿಜಯನಗರ (ಹೊಸಪೇಟೆ) : ಹಂಪಿಯ ಮೃಗಾಲಯ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜಿಯಾಲಜಿಕಲ್ ಪಾರ್ಕ್ ಅ.21ರಂದು ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.
ಮೃಗಾಲಯವು ಪ್ರತಿ ಮಂಗಳವಾರದಂದು ಸಾರ್ವಜನಿಕರ ವೀಕ್ಷಣೆಗೆ ರಜೆ ದಿನವಾಗಿರುತ್ತದೆ. ಆದರೆ ದೀಪಾವಳಿ ಹಬ್ಬದ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಪ್ರವಾಸಿಗರಿಗೆ ವೀಕ್ಷಣೆಗೆ ಅನುವು ಮಾಡಿಕೊಡಲು ರಜಾ ಮುಕ್ತಗೊಳಿಸಿ ನಿತ್ಯದಂತೆ ಸೇವೆ ನೀಡಲಾಗುವುದು. ಕುಟುಂಬದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯ ವೀಕ್ಷಣೆಗೆ ಆಗಮಿಸಿ ಪ್ರಾಣಿಗಳ ವೀಕ್ಷಣೆ ಮಾಡಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.