ಹರಪನಹಳ್ಳಿ: ಯುವಜನರು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಸಮಗ್ರ ಜ್ಞಾನ ಹೊಂದಿ, ಸಂವಿಧಾನದ ಆಶಯಗಳನ್ನು ಗೌರವಿಸುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಕರೆ ನೀಡಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಯುವ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಯುವಜನರ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಯುವಕರು ಜವಾಬ್ದಾರಿಯುತ ನಾಗರಿಕರಾಗಿ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು, ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಸ್.ಆರ್. ಗಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಮುಖಂಡರಾದ ಗುಡಿ ನಾಗರಾಜ್, ಹುಲಿಕಟ್ಟೆ ಚಂದ್ರಪ್ಪ, ನಿಚ್ಚವನಹಳ್ಳಿ ಭೀಮಪ್ಪ, ಓ. ಮಹಾಂತೇಶ್, ನಿಲಯಪಾಲಕ ಎನ್.ಜಿ. ಬಸವರಾಜ್, ಶಾಸಕರ ಆಪ್ತ ಸಹಾಯಕ ಪ್ರಶಾಂತ್ ಹಿರೇಮಠ್, ದಲಿತ ಸಂಘಟನೆ ಮುಖಂಡ ಸುಭಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor