Harapanahalli | ಒಂದು ಯೂನಿಟ್ ರಕ್ತದಿಂದ ಅಮೂಲ್ಯ ಜೀವ ಉಳಿಸಬಹುದು: ಶಾಸಕಿ ಲತಾ ಮಲ್ಲಿಕಾರ್ಜುನ
ಬೃಹತ್ ರಕ್ತದಾನ ಶಿಬಿರ
ಹರಪನಹಳ್ಳಿ: ರಕ್ತದಾನವು ಅತ್ಯಂತ ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ನಾವು ನೀಡುವ ಒಂದು ಯೂನಿಟ್ ರಕ್ತವು ಮತ್ತೊಬ್ಬರ ಅಮೂಲ್ಯ ಜೀವ ಉಳಿಸಲು ಸಹಕಾರಿಯಾಗುತ್ತದೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ತಿಳಿಸಿದರು.
ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಹರಪನಹಳ್ಳಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಬುಧವಾರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ ದಾನಿಗಳಿಗೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರು ಪ್ರಮಾಣಪತ್ರ ವಿತರಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಮುಖಂಡ ಲಾಟಿ ದಾದಾಪೀರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅರವಿಂದ್, ಡಾ. ರಾಜೇಶ್, ಡಾ. ಜಿ.ವಿ. ಸಿಂಧೂ ಸೇರಿದಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.