ಹರಪನಹಳ್ಳಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಜಾಗೃತಿ ಸಭೆ
Update: 2026-06-18 23:47 IST
ಹರಪನಹಳ್ಳಿ: ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗುರುವಾರ ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ರವರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಸಭೆ ನಡೆಸಿದರು.
ತಾಲೂಕಿನ ಹಲವಾಗಲು, ಕುಂಚೂರು, ನಿಟ್ಟೂರು, ಕಡತಿ,ದುಗ್ಗಾವತಿ,ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಸ್ಐಆರ್ ಕುರಿತು ಕಾರ್ಯಕರ್ತರಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಕೆ.ಶೇಖರಪ್ಪ,ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಆರ್.ಲೋಕೇಶ್,ತಾಲೂಕು ಪ್ರಧಾನ ಕಾರ್ಯದರ್ಶಿ ಪಂಪನಾಯ್ಕ್, ಹಲವಾಗಲು ಗ್ರಾ.ಪಂ.ಮಾಜಿ ಅಧ್ಯಕ್ಷ ಎಂ.ದ್ಯಾಮಪ್ಪ,ಬಿಎಲ್ಎ 1 ಪುರ್ಯ ನಾಯ್ಕ್, ಪಕ್ಷದ ಬಿಎಲ್ಎ 2 ಶಕ್ತಿ ಕೇಂದ್ರದ ಪ್ರಮುಖರು, ಗ್ರಾಮ ಘಟಕದ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.