Harapanahalli | ತರಳಬಾಳು ಪಾಲಿಟೆಕ್ನಿಕ್ನಲ್ಲಿ ರಕ್ತದಾನ ಶಿಬಿರ
ಹರಪನಹಳ್ಳಿ: ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಯುವಜನರು ಸಮಾಜ ಸೇವೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಾಲೇಜಿನ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಕೆ.ಜಿ. ಶಿವಯೋಗಿ ಕರೆ ನೀಡಿದರು.
ನಗರದ ತರಳಬಾಳು ಜಗದ್ಗುರು ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೋಮವಾರ ಲಿಂ. ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ 35ನೇ ಶ್ರದ್ಧಾಂಜಲಿ ಸಮಾರಂಭದ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಬಿರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉತ್ಸಾಹದಿಂದ ಪಾಲ್ಗೊಂಡರು. ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಯ ಮಹತ್ವವನ್ನು ಸಾರಿದರು.
ಈ ಸಂದರ್ಭದಲ್ಲಿ ತರಳಬಾಳು ಜಗದ್ಗುರು ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಎಚ್.ಕೆ. ಶಿವಕುಮಾರ್, ಕೇಂದ್ರ ಸಲಹಾ ಸಮಿತಿ ಸದಸ್ಯ ಸಿ. ಸಿದ್ದಪ್ಪ ಸೇರಿದಂತೆ ಹಲವು ಗಣ್ಯರು ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು.