Harapanahalli | ಹೃದಯಾಘಾತದಿಂದ ಕಾಂಗ್ರೆಸ್ ಕಾರ್ಯಕರ್ತ ಎನ್.ಶಂಕರ್ ನಿಧನ
ಹರಪನಹಳ್ಳಿ: ಕಾಂಗ್ರೆಸ್ ಕಾರ್ಯಕರ್ತ ಪಟ್ಟಣದ ತೆಲುಗರ ಓಣಿ ನಿವಾಸಿ ಎನ್. ಶಂಕರ್ (49) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾದರು.
ಮೃತ ಎನ್. ಶಂಕರ್ ಅವರು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ಸಲಹಾ ಸಮಿತಿ ಸದಸ್ಯರಾಗಿ ಹಾಗೂ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಎಸ್‌ಡಿಎಂಸಿ ಮಾಜಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವಿದೆ. ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ: ಸ್ಥಳೀಯ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕುಬೇರಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕನಕಬಸ್ಸಾಪುರ ಮಂಜುನಾಥ ಸೇರಿದಂತೆ ಹಲವು ಮುಖಂಡರು ಹಾಗೂ ಸವಿತಾ ಸಮಾಜದ ಮುಖಂಡರು ಎನ್. ಶಂಕರ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.