Harapanahalli | ಸಿಂಗ್ರಿಹಳ್ಳಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2026-08-15 17:15 IST

ಹರಪನಹಳ್ಳಿ: ತಾಲೂಕಿನ ಸಿಂಗ್ರಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸಿ. ಹಾಲೇಶ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷರು ಹಾಗೂ ಸದಸ್ಯರು, ಮುಖ್ಯಶಿಕ್ಷಕ ಜಿ. ಕೃಷ್ಣಮೂರ್ತಿ, ಸಹ ಶಿಕ್ಷಕರು, ಅತಿಥಿ ಶಿಕ್ಷಕರು, ಬಿಸಿಯೂಟದ ಸಿಬ್ಬಂದಿ, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಗ್ರಾಮದ ಮುಖಂಡರು, ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News