×
Ad

Harapanahalli | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಎಂ.ಪಿ.ಲತಾ ಚಾಲನೆ

Update: 2026-07-01 18:11 IST

ಹರಪನಹಳ್ಳಿ : ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಿಕ್ಷಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕಾಮಗಾರಿಗಳಿಗೆ ಬುಧವಾರ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ಕುಂಚೂರು ಗ್ರಾಮದ ಸರ್ಕಾರಿ ಉರ್ದು ಶಾಲೆಗೆ ಒಂದು ಹೊಸ ತರಗತಿ ಕೊಠಡಿ ಹಾಗೂ ಅರಸನಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ತರಗತಿ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಬಳಿಕ ಹಿರೇಮೇಗಳಗೆರೆ ಗ್ರಾಮದಲ್ಲಿ ಹಳ್ಳಿಮರದಿಂದ ಸರ್ಕಾರಿ ಪ್ರಾಥಮಿಕ ಶಾಲೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂರು ಹೊಸ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಅನಂತರ ಅಡವಿಹಳ್ಳಿ ಗ್ರಾಮದಿಂದ ದೇವರತೀಮಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಬದಿಯಲ್ಲಿ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಎಚ್. ವಸಂತಪ್ಪ, ಲಕ್ವಳ್ಳಿ ಹನುಮಂತಪ್ಪ, ಚಂದ್ರಪ್ಪ, ಶಂಕ್ರಪ್ಪ, ಶಫಿವುಲ್ಲ, ಪರಶುರಾಮ, ಶಾಸಕರ ಆಪ್ತ ಸಹಾಯಕ ಮತ್ತೂರು ಬಸವರಾಜ, ಪೂಜಾರ್ ಕೃಷ್ಣನಾಯ್ಕ್ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News