ಹರಪನಹಳ್ಳಿ | ಮೊಬೈಲ್ ಮಕ್ಕಳ ದೈಹಿಕ–ಮಾನಸಿಕ ಆರೋಗ್ಯಕ್ಕೆ ಮಾರಕ : ಮಂಜುನಾಥ್ ಕೋವಿ
ಹರಪನಹಳ್ಳಿ: ಇಂದಿನ ಮಕ್ಕಳಿಗೆ ಮೊಬೈಲ್ ಫೋನ್ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಆಧುನಿಕ ವ್ಯಸನವಾಗಿದೆ ಎಂದು ವಲಯ ಸಂಪನ್ಮೂಲ ವ್ಯಕ್ತಿ ಮಂಜುನಾಥ್ ಕೋವಿ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಮಾದರಿ ಪ್ರಾಥಮಿಕ ಶಾಲೆಯ ಮೂರನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಟಿವಿ ಮತ್ತು ಮೊಬೈಲ್ ಬಳಕೆಯಿಂದ ಮಕ್ಕಳನ್ನು ದೂರವಿಡಲು ಪೋಷಕರು ಮುಂದಾಗಬೇಕು ಎಂದು ಸಲಹೆ ನೀಡಿದರು.
ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಂದ ನೃತ್ಯ, ನಾಟಕ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶಿಸಲ್ಪಟ್ಟವು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಕುಮಾರಸ್ವಾಮಿ, ಉಪಾಧ್ಯಕ್ಷ ಮಡ್ರಳ್ಳಿ ಕೆಂಚಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಕೆ. ದಡಾರಪ್ಪ, ಮುಖ್ಯ ಶಿಕ್ಷಕ ಸಾದೇವ, ಎಂ.ಎಂ.ಚಂದ್ರಪ್ಪ, ಕೊಟ್ಟುರೇಶಪ್ಪ, ಶಿವಕುಮಾರ್, ಭಾಗ್ಯಮ್ಮ, ಕುರುಡಿ ರೇವಣಸಿದ್ದಪ್ಪ, ಸೋಮಶೇಖರ್ ಗೌಡ, ಸಿದ್ದಪ್ಪ, ಸಿದ್ದೇಶ್ವರ ಪಾಟೀಲ್, ಮತ್ತಿಹಳ್ಳಿ ಶೇಖರಪ್ಪ, ಮಂಜಪ್ಪ, ಯುವರಾಜ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.