ಹರಪನಹಳ್ಳಿ: ತೈಲ ಬೆಲೆ ಇಳಿಸಲು ಆಗ್ರಹಿಸಿ ಧರಣಿ
ಹರಪನಹಳ್ಳಿ: ಪೆಟ್ರೋಲ್, ಡಿಸೆಲ್ , ಎಲ್ ಪಿ ಜಿ ಗ್ಯಾಸ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಇಳಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿ ಕ್ರಾಂತಿಕಾರಿ ಯುವಜನ ಸಂಘಟನೆಯ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸುವ ಮೂಲಕ ತಹಶೀಲ್ದಾರ ರವರಿಗೆ ಮನವಿ ಪತ್ರ ಸಲ್ಲಿಸಿದರು.
ಅಗತ್ಯವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಇದರಿಂದ ದುಡಿಯುವ ಜನರು, ರೈತರು, ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಗಾಯದಮೇಲೆ ಬರೆಎಳೆದಂತಾಗಿದೆ ಎಂದು ಅವರು ಹೇಳಿದರು.
ಎಲ್ಪಿಜಿ ಗ್ಯಾಸ್ ಬೆಲೆಯನ್ನು ಇಳಿಕೆ ಮಾಡಬೇಕು, ರೈತರಿಗೆ ಅಗತ್ಯವಾಗಿರುವ ರಸಗೊಬ್ಬರವನ್ನು ಪೂರೈಸಬೇಕು ಹಾಗೂ ದೇಶದಲ್ಲಿ ಇಂಧನ ಕೊರತೆಯಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಅವರು ಆಗ್ರಹಿಸಿದರು.
ಅಮೆರಿಕಾ ದೇಶದ ನಿರ್ಬಂದಗಳಿಗೆ ಭಾರತವು ತಲೆಬಾಗದೇ ಕಡಿಮೆ ಬೆಲೆ ಮತ್ತು ಯಾವುದೇ ಷರತ್ತುಗಳಿಲ್ಲದೇ ತೈಲ ಪೂರೈಸುವ ದೇಶಗಳಿಂದ ಅಗತ್ಯಕ್ಕೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ರಸಗೊಬ್ಬರವನ್ನು ಆಮದು ಮಾಡಿಕೊಂಡು ಸಮರ್ಪಕವಾಗಿ ಪೂರೈಕೆ ಮಾಡಬೇಕು ಎಂಬ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ ರವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಆರ್ ವೈ ಎ ರಾಜ್ಯ ಸಮಿತಿ ಸದಸ್ಯ ಕೃಷ್ಣ ಮಲ್ಲಡದ, ಬಿ.ಎಸ್.ಪ್ರಕಾಶ, ಮೋಹನ್, ತಿಲಕ್, ವಿನಯ, ಅಭಿ, ನವೀನ, ಬಾಬು, ಇಬ್ರಿ, ಅನ್ವರ್, ರಘು, ಎಂ,ದಾದು, ಶುಕ್ರು, ಸಂದೇರ ಪರಶುರಾಮ,ಸೇರಿದಂತೆ ಇತರರು ಪಾಲ್ಗೊಂಡಿದ್ದರು.