ಹರಪನಹಳ್ಳಿ: ನಗರದ ಐದು ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮ ಲೆಕ್ಕಿಗ (ವಿಎ) ನೇಮಕಾತಿ ಪರೀಕ್ಷೆ ಭಾನುವಾರ ಶಾಂತಿಯುತವಾಗಿ ನಡೆಯಿತು.

ನಗರದ ಎಡಿಬಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಚ್‌ಪಿಎಸ್, ಎಸ್‌ಯುಜೆಎಂ ಹಾಗೂ ಫಾರ್ಮಸಿ ಕಾಲೇಜುಗಳಲ್ಲಿ ಪರೀಕ್ಷೆ ಆಯೋಜಿಸಲಾಗಿತ್ತು. ಬೆಳಿಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ ಎರಡನೇ ಪತ್ರಿಕೆಯ ಪರೀಕ್ಷೆ ನಡೆಯಿತು.

ಐದು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2,150 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.

ತಹಶೀಲ್ದಾರ್ ಬಿ.ವಿ. ಗಿರೀಶಬಾಬು, ಬಿಇಒ ಲೇಪಾಕ್ಷಪ್ಪ, ಪೌರಾಯುಕ್ತೆ ರೇಣುಕಾ ದೇಸಾಯಿ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಗಂಗಪ್ಪ ಸೇರಿದಂತೆ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿಪಿಐ ಮಹಾಂತೇಶ್ ಜಿ. ಸಜ್ಜನ್ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor