ಹೊಸಪೇಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ
Update: 2025-10-24 20:27 IST
ವಿಜಯನಗರ (ಹೊಸಪೇಟೆ) : ಗುಡುಗು ಸಹಿತ ಸುರಿದ ಭಾರೀ ಮಳೆಯಿಂದಾಗಿ ಹೊಸಪೇಟೆಯ ಎಂ.ಜೆ.ನಗರದಲ್ಲಿ ಮೂರನೇ ಮಹಡಿಯ ಮನೆಯ ಮೇಲಿನ ತಡೆಗೋಡೆ ಕುಸಿದ ಘಟನೆ ಸಂಭವಿಸಿದೆ.
ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಶುಕ್ರವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಸುರಿದಿದ್ದು, ಮುಂದಿನ ಎಂಟು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಜನಸಾಮಾನ್ಯರು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.