ಹೊಸಪೇಟೆ: ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆಗೆ ಆಗ್ರಹ
Update: 2025-08-02 23:46 IST
ಹೊಸಪೇಟೆ: ಕಳೆದ ಹಲವಾರು ವರ್ಷಗಳಿಂದ ಕೊಳಗೇರಿ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಬಡ ಕುಟುಂಬಗಳಿಗೆ ಸರಕಾರ ಹಕ್ಕು ಪತ್ರ ವಿತರಿಸಬೇಕೆಂದು ಆಗ್ರಹಿಸಿ ಮಾನವ ಹಕ್ಕು ಒಕ್ಕೂಟದ ವತಿಯಿಂದ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ವಿಜಯನಗರ ಜಿಲ್ಲೆಯಾದಂತ ಕೊಳಗೇರಿ ನಿವಾಸಿಗಳು ಹಲವಾರು ವರ್ಷಗಳಿಂದ ಸರಕಾರದ ಮಾರ್ಗ ಸೂಚನೆಯಂತೆ SC/ST ವರ್ಗ- ರೂ. 1100/-ಜನರಲ್ ವರ್ಗದವರು- ರೂ. 2100/-ಹಣ ಪಾವತಿ ಮಾಡಿ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದರ ಸ್ಲಂ ಬೋರ್ಡ್ ಅಧಿಕಾರಿಗಳು ಹಕ್ಕುಪತ್ರ ವಿತರಿಸಿಲ್ಲ. ಹೀಗಾಗಿ ಕೊಳಗೇರಿಯ ನಿವಾಸಿಗಳು ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ. ಆದಷ್ಟು ಬೇಗನೆ ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ಕೊಡುವ ಮೂಲಕ ಸಮಸ್ಯೆ ಬಗೆಹರಿಸಬೇಕೆಂದು ಹೊಸಪೇಟೆ ತಾಲೂಕು ದಂಡಾಧಿಕಾರಿಗಳಿಗೆ ಮಾನವ ಹಕ್ಕು ಒಕ್ಕೂಟದ ವಿಜಯನಗರ ಜಿಲ್ಲಾ ಅಧ್ಯಕ್ಷ ಇಸ್ಮಾಯಿಲ್ ಶೇಖ್ ಮತ್ತು ಪದಾಧಿಕಾರಿಗಳು ಮನವಿ ಸಲ್ಲಿಸಿದರು.