×
Ad

ಹೊಸಪೇಟೆ | ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಈಡಿ ದಾಳಿ; ಪರಿಶೀಲನೆ

Update: 2025-08-13 12:55 IST

ಹೊಸಪೇಟೆ : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಇಬ್ಬರು ಉದ್ಯಮಿಗಳ ಮೆನೆ, ಕಚೇರಿಗಳ ಮೇಲೆ ಈಡಿ ಅಧಿಕಾರಿಗಳು  ದಾಳಿ ನಡೆಸಿ, ದಾಖಲೆಗಳಿಗಾಗಿ ಹುಡುಕಾಟ ನಡೆಸಿದೆ.

ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಕಾರದಪುಡಿ ಮಹೇಶ್ ಮತ್ತು ಸ್ವಸ್ತಿಕ್‌ ನಾಗರಾಜ್ ಎಂಬವರ ಮನೆಗಳು, ಕಚೇರಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಕಾರದಪುಡಿ ಮಹೇಶ್‌ ಅವರು ನಗರಸಭಾ ಸದಸ್ಯರೂ ಆಗಿದ್ದು, ಜೆ.ಪಿ.ನಗರದಲ್ಲಿರುವ ಅವರ ಮನೆ, ಶುದ್ಧ ಕುಡಿಯುವ ನೀರಿನ ಘಟಕ, ಸ್ಟೀಲ್ ಅಂಗಡಿ ಸೇರಿದಂತೆ ಎಲ್ಲಾ ಸ್ಥಳಗಳಲ್ಲಿ ಈಡಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಸ್ವಸ್ತಿಕ್ ನಾಗರಾಜ್ ಅವರ ಮನೆ ರಾಜೀವ್ ನಗರದಲ್ಲಿದ್ದು, ಅವರ ಕಚೇರಿ ಮತ್ತು ಸ್ಟೀಲ್ ಅಂಗಡಿಯನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News