×
Ad

ಹೊಸಪೇಟೆ | ದೇವದಾಸಿಯರ ಸಮರ್ಪಕ ಸರ್ವೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Update: 2026-01-19 21:31 IST

ವಿಜಯನಗರ (ಹೊಸಪೇಟೆ): ದೇವದಾಸಿಯರ ಸಮರ್ಪಕ ಸರ್ವೆ ನಡೆಸಿ ಹಕ್ಕುಪತ್ರ ಹಾಗೂ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಮಕ್ಕಳ ಹೋರಾಟ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ನೂರಾರು ಮಹಿಳೆಯರು ಬೃಹತ್ ಪ್ರತಿಭಟನೆ ನಡೆಸಿದರು.

1982ರಲ್ಲಿ ನಡೆದ ಸರ್ವೆಯಲ್ಲಿ ಆಗಿನ ದೇವದಾಸಿ ಮಹಿಳೆಯರನ್ನು ಮಾತ್ರ ಪರಿಗಣಿಸಲಾಗಿತ್ತು. ಆದರೆ ಸೂಕ್ತ ದಾಖಲೆಗಳಿಲ್ಲದ ಕಾರಣ ಹಾಗೂ ಆನಂತರ ಹುಟ್ಟಿದವರನ್ನು ಅಧಿಕಾರಿಗಳು ಗಣತಿಯಿಂದ ಹೊರಗಿಟ್ಟಿದ್ದಾರೆ. ಇದರಿಂದಾಗಿ ಸುಮಾರು 10 ಸಾವಿರ ಕುಟುಂಬಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿವೆ. ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶಿಸಿ ಈ ಲೋಪ ಸರಿಪಡಿಸಬೇಕು ಹಾಗೂ ಕುಟುಂಬದ ಮೂರು ತಲೆಮಾರಿನ ಸದಸ್ಯರನ್ನು ಗಣತಿಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಅಂಗೀಕರಿಸಲಾದ ಹೊಸ ವಿಧೇಯಕವು ಹಳೆಯ ಕಾಯ್ದೆಗಳನ್ನು ರದ್ದುಪಡಿಸಿದೆ. ಆದರೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ರದ್ದುಗೊಂಡ ಹಳೆಯ ಕಾಯ್ದೆಗಳನ್ನೇ ತೋರಿಸಿ ಹೊಸ ಅರ್ಜಿಗಳನ್ನು ತಳ್ಳಿಹಾಕುತ್ತಿದ್ದಾರೆ. ಈ ತಾರತಮ್ಯ ನಿಲ್ಲಿಸಿ ಹೊಸ ಪಟ್ಟಿ ಸಿದ್ಧಪಡಿಸಬೇಕು ಎಂದು ಸಂಘಟನೆಯ ಮುಖಂಡರು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News