×
Ad

ಹೊಸಪೇಟೆ | ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

Update: 2025-11-11 15:09 IST

ಹೊಸಪೇಟೆ : ವಿಜಯನಗರ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದಿಂದ ರಾಜ್ಯ ಸರ್ಕಾರದ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೆ ರಾಜ್ಯ ಸರ್ಕಾರ ರಾಜಾತಿಥ್ಯ ನೀಡುತ್ತಿರುವುದು ಕ್ರಿಮಿನಲ್‌ಗಳನ್ನು ಪೋಷಿಸುವ ಕೆಲಸವಾಗಿದ್ದು, ಈ ಕ್ರಮದ ವಿರುದ್ಧ ರಾಜ್ಯದ ಜನತೆಯಲ್ಲಿ ಆಕ್ರೋಶ ಉಂಟಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಆರೋಪಿಸಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ವಿಜಯನಗರ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಿಎಂ ಹಾಗೂ ಗೃಹ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವರ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿಕೊಂಡರು.

ರಾಜ್ಯ ಸರ್ಕಾರದ ನಿಲುವನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದ್ದು, ಈ ಘಟನೆಗೆ ಸರ್ಕಾರವೇ ನೈತಿಕ ಹೊಣೆ ಹೊರಬೇಕು ಎಂದು ಪ್ರತಿಭಟನಾಕಾರರು ಹೇಳಿದರು.

ಪ್ರತಿಭಟನೆಯಲ್ಲಿ ಯುವ ಮುಖಂಡರಾದ ನಟರಾಜ್, ಸಚಿನ್ ಕುಮಾರ್, ಸೂರಿ ಬಂಗಾರು, ಸಂಗಮೇಶ್ ಕಡೆಮನಿ, ವ್ಯಾಸರಾಜ್, ಸಂಪತ್ ಮೂರ್ತಿ, ಗಿರೀಶ್, ಹನುಮನಾಯ್ಕ್, ಗೌಳಿ ಬಸವರಾಜ್, ರುದ್ರಪ್ಪ ಗೌಳಿ, ಹೊನ್ನೂರಪ್ಪ, ಉಮಾದೇವಿ, ಎಚ್. ರಾಘವೇಂದ್ರ, ಮಣಿಕಂಠ ಕೊಟ್ಟೂರು, ವಿಕಾಶ್, ವೆಂಕೋಬಿ ದೇವಲಾಪುರ ಹಾಗೂ ಇತರರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News