×
Ad

ಹೊಸಪೇಟೆ : ನಗರದ ಎಪಿಎಂಸಿ ಮಾರುಕಟ್ಟೆಗೆ ಉಪ ಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ

Update: 2025-03-14 10:19 IST

ವಿಜಯನಗರ: ಬೆಳ್ಳಂ ಬೆಳಗ್ಗೆ ನಗರದ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ಬಿ.ವೀರಪ್ಪ ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು ರೈತರ ಸಮಸ್ಯೆ, ಸ್ವಚ್ಛತೆ ಮತ್ತು ಕುಡಿಯುವ ನೀರು ಸೇರಿದಂತೆ ನಮ್ಮ ರೈತರು ವಿಶ್ರಾಂತಿ ಪಡೆಯಲು ಯಾವುದೇ ರೀತಿಯ ಸೂಕ್ತ ವ್ಯವಸ್ಥೆ ಇಲ್ಲ. ಇವೆಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಪಿಎಂಸಿ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿಗೆ ಸೂಚಿಸಿದ್ದಾರೆ.

ರೈತರ ಬೆಳೆಗೆ ಸೂಕ್ತ ಬೆಲೆ ಒದಗಿಸಿಕೊಡುವಲ್ಲಿ ಮತ್ತು ಅವರ ಬೆಳೆಯ ತೂಕದಲ್ಲಿ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ನಂಬಿರುವ ಅಮಾಯಕ ರೈತರಿಗೆ ಎಪಿಎಂಸಿ ಕಚೇರಿಯ ಸ್ಕೇಲ್ ನಲ್ಲಿ 2 ಕೆಜಿಯಷ್ಟು ವ್ಯತ್ಯಾಸ ಕಂಡು ಬಂದಿದ್ದು‌, ಸ್ಕೇಲ್ ಸೀಜ್ ಮಾಡಿ ಪ್ರಕರಣ ದಾಖಲಿಸಲು ಸೂಚಿಸಿ ತೂಕ ಮತ್ತು ಅಳತೆ ಅಧಿಕಾರಿ ಅಮೃತ ಚೌವ್ಹಾಣ್ ಗೆ ವರದಿ ನೀಡಲು ಆದೇಶಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News