×
Ad

ಹೊಸಪೇಟೆ | ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

Update: 2025-08-14 17:44 IST

ಹೊಸಪೇಟೆ: ನಗರದ ಪ್ರಮುಖ ಮುಖ್ಯ ರಸ್ತೆಗಳು ಸೇರಿದಂತೆ ಅಂಜುಮನ್ ಶಾದಿ ಮಹಲ್ ಮುಖ್ಯರಸ್ತೆ, ಎಸ್ ಆರ್ ನಗರ, ರಾಮ ಟಾಕೀಸ್ ಹಿಂಭಾಗ, ವಾರ್ಡ್ ನಂಬರ್ 9ರಲ್ಲಿ ಇದ್ದಕ್ಕಿದ್ದಂತೆ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ಮತ್ತು ಚರಂಡಿ ನೀರು ಮಿಶ್ರಣಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಲವಾರು ವರ್ಷಗಳಿಂದ ಈ ಸಮಸ್ಯೆ ಇದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಮತ್ತು ನಗರಸಭೆ ಸದಸ್ಯರು ಯಾರು ನಮ್ಮ ಸಮಸ್ಯೆಗೆ ಸ್ಪಂದಿಸಲಿಲ್ಲ. ಈಗಲಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಲ್ಲಿಯ ನಿವಾಸಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News