×
Ad

ಹೊಸಪೇಟೆ | ಮೇ.24ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

Update: 2025-05-22 22:12 IST

ವಿಜಯನಗರ : ನಗರದಲ್ಲಿನ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೇ.24 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಿರ್ವಹಣಾ ಕೆಲಸ ಮತ್ತು ಇತರ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ನಗರದಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.  

ನಗರದ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೊಳಪಡುವ ಸುತ್ತ ಮುತ್ತಲಿನ ಪ್ರದೇಶಗಳಾದ ಬಸವೇಶ್ವರ ಬಡವಾಣೆ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್, ಡಾ.ಪುನೀತ್ ರಾಜಕುಮಾರ್ ಸರ್ಕಲ್, ರಾಜೀವ ನಗರ. ರೈಲ್ವೆ ಸ್ಟೇಷನ್, ಅಮರಾವತಿ, ಚಿತ್ತವಾಡಗಿ, ಶುಗರ್ ಫ್ಯಾಕ್ಟರಿ, ಹಂಪಿ ರೋಡ್, ಗಣೇಶ ಗುಡಿ, ನೌಕರ ಕಾಲೋನಿ, ಗಾಂಧಿ ಸರ್ಕಲ್, ಬಸ್ ಸ್ಟಾಂಡ್. ಮೇನ್ ಬಝಾರ್, ಕೋರ್ಟ್, ರಾಣಿಪೇಟೆ, ಭಟ್ರಹಳ್ಳಿ, ಬೆನಕಾಪುರ, ಬಸವನದುರ್ಗ, ನಾಗೇನಹಳ್ಳಿ ಹಾಗೂ ನರಸಾಪುರ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News