ಹೊಸಪೇಟೆ | ಸಾಧನಾ ಸಮಾವೇಶ : ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಭಾಗಿ
Update: 2025-05-20 14:04 IST
ಹೊಸಪೇಟೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನಾ ಮತ್ತು ಜನತಾ ಸಮರ್ಪಣಾ ಕಾರ್ಯಕ್ರಮಕ್ಕೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ, ಕಾನೂನು ಸಚಿವ ಎಚ್.ಕೆ.ಪಾಟೀಲ್ ಸಹಿತ ಬಹುತೇಕ ಎಲ್ಲ ಸಚಿವರು, ಶಾಸಕರು ಸಮಾವೇಶಕ್ಕೆ ಆಗಮಿಸಿದ್ದಾರೆ.