ಹೊಸಪೇಟೆ | 18ನೇ ಶತಮಾನದಲ್ಲಿ ಶೂದ್ರರಿಗೆ ಶಿಕ್ಷಣದ ಹಕ್ಕಿರಲಿಲ್ಲ : ಆರ್ ಮೋಹನ್ ರಾಜ್
Update: 2025-09-01 19:51 IST
ಹೊಸಪೇಟೆ : ಭಾರತದಲ್ಲಿ 18ನೇ ಶತಮಾನದಲ್ಲಿ ಶಿಕ್ಷಣ ಕೇವಲ ಬ್ರಾಹ್ಮಣ, ಕ್ಷತ್ರಿಯ, ವೈಶ್ಯರಿಗೆ ಮಾತ್ರ ಮೀಸಲಿತ್ತು. ಆ ಕಾಲಘಟ್ಟದಲ್ಲಿ ಶೂದ್ರರಿಗೆ ಶಿಕ್ಷಣದ ಹಕ್ಕು ಇರಲಿಲ್ಲ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಡಾ.ಆರ್ ಮೋಹನ್ ರಾಜ್ ಹೇಳಿದರು.
ಇಲ್ಲಿನ ಖಾಸಗಿ ಹೋಟೆಲ್ ನ ಸಭಾಂಗಣದಲ್ಲಿ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ಸಂದರ್ಭದಲ್ಲಿ ಅವರು ಮಾತನಾಡಿದರು.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಉಪಾಧ್ಯಕ್ಷ ರಾಜು ಎಂ.ತಳವಾರ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಶಿವಕುಮಾರ್ ಮಾತನಾಡಿದರು.
ಈ ಸಂದರ್ಭದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಎ.ಚಿದಾನಂದ, ವಿಜಯನಗರ ಜಿಲ್ಲಾ ಸಂಚಾಲಕ ಹನುಮಂತಪ್ಪ ಚಿನ್ನು, ಮಹಿಳಾ ಜಿಲ್ಲಾ ಘಟಕದ ಸಂಚಾಲಕಿ ಸುಮಲತಾ, ಜಿಲ್ಲಾ ಸಂಘಟನಾ ಸಂಚಾಲಕಿ ಸಾವಿತ್ರಿ ದೀಪ್ ಇತರರು ಇದ್ದರು.