ಹೊಸಪೇಟೆ ಜಿಲ್ಲಾ ಕಾರಾಗೃಹದಲ್ಲಿ ಬಂದಿಗಳಿಗಾಗಿ ಒಳಾಂಗಣ ಕ್ರೀಡಾಕೂಟ
ವಿಜಯನಗರ (ಹೊಸಪೇಟೆ) : ದಸರಾ ಹಬ್ಬದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹೊಸಪೇಟೆಯ ಜಿಲ್ಲಾ ಕಾರಾಗೃಹದಲ್ಲಿ ಬಂದಿಗಳ ಮನರಂಜನೆಗಾಗಿ ಸೋಮವಾರ ಒಳಾಂಗಣ ಕ್ರೀಡಾಕೂಟ ಆಯೋಜಿಸಲಾಯಿತು.
ಕಾರಾಗೃಹ ಸುಧಾರಣಾ ಸೇವಾ ಇಲಾಖೆಯ ಮಹಾನಿರ್ದೇಶಕ ಅಲೋಕ್ ಕುಮಾರ್ ಹಾಗೂ ಜಿಲ್ಲಾ ಕಾರಾಗೃಹ ಅಧೀಕ್ಷಕ ಎಫ್.ಜಿ. ಬಾರಿಕೇರ್ ಅವರ ನಿರ್ದೇಶನದಂತೆ ನಡೆದ ಕ್ರೀಡಾಕೂಟದಲ್ಲಿ ಚೆಸ್, ಕೇರಂ ಹಾಗೂ ಮ್ಯೂಸಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಶಿಕ್ಷಕರ ಸಂಘದ ಉಪಾಧ್ಯಕ್ಷೆ ವಿಜಯಕುಮಾರಿ ಸೇರಿದಂತೆ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಕ್ರೀಡಾಕೂಟದಲ್ಲಿ ವಿಜೇತರಾದ ಬಂದಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಜೈಲರ್‌ಗಳಾದ ಎಸ್.ಎಸ್. ಲಚ್ಯಾಣ, ಕೆ. ರಿಯಾಝ್, ಸೈನಿಕ ಭೀಮೇಶ್ ಸೇರಿದಂತೆ ಕಾರಾಗೃಹದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.