×
Ad

ಕರ್ನಾಟಕ ರಾಜ್ಯೋತ್ಸವ: ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಅರ್ಜಿ ಅಹ್ವಾನ

Update: 2025-10-18 22:22 IST

ವಿಜಯನಗರ (ಹೊಸಪೇಟೆ):  ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲಾ ವ್ಯಾಪ್ತಿಯ ಮಹನೀಯರಿಗೆ ಸನ್ಮಾನಿಸಲು ಸಂಬAಧಿಸಿದ ಇಲಾಖೆಗಳಲ್ಲಿ ಅ.25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಜಿಲ್ಲಾ ವ್ಯಾಪ್ತಿಯ ನಿವಾಸಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಂಗೀತ, ಸಾಹಿತ್ಯ, ಶಿಲ್ಪಕಲೆ, ಶಿಕ್ಷಣ, ಕೃಷಿ, ತೋಟಗಾರಿಕೆ, ಮಾಧ್ಯಮ, ವಿಕಲಚೇತನರು, ಕ್ರೀಡಾಪಟುಗಳು ಸೇರಿದಂತೆ ಸಾಮಾಜಿಕವಾಗಿ ಸಾಧನೆಗೈದ ಮಹನೀಯರು ಸಂಬAಧಿಸಿದ ಆಯಾ ಇಲಾಖೆಗಳಲ್ಲಿ ಅರ್ಜಿಗಳನ್ನು ಅಕ್ಟೋಬರ್ 25 ರೊಳಗೆ ಸಲ್ಲಿಸಬಹುದಾಗಿದೆ. ಅರ್ಹ ಸಾಧಕ ಮಹನೀಯರಿಗೆ ಕರ್ನಾಟಕ ರಾಜ್ಯೋತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಗೌರವಿಸಿ ಸನ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News