×
Ad

ಕಾಕುಬಾಳ | ಅಕ್ರಮ ಪಡಿತರ ಅಕ್ಕಿ ಜಪ್ತಿ

Update: 2026-03-04 23:44 IST

ವಿಜಯನಗರ, ಮಾ. 4: ತಾಲೂಕಿನ ಕಾಕುಬಾಳ ಗ್ರಾಮದ ಜೋಳದ ರಸ್ತೆ ಕರಿಯಮ್ಮನ ಗುಡಿ ಸಮೀಪ ಮನೆಯೊಂದರ ಮುಂದೆ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.

ಯಾವುದೇ ಪರವಾನಗಿ ಇಲ್ಲದೆ ಅನಾಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 2.10 ಲಕ್ಷ ರೂ. ಮೌಲ್ಯದ 60.80 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ.

ಈ ಕುರಿತು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಮತ್ತು ಸಾಗಣೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಇಂತಹ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News