ಕೊಟ್ಟೂರು | ರೇಣುಕಾಚಾರ್ಯ ಜಯಂತಿ ಆಚರಣೆ
ಕೊಟ್ಟೂರು : ರೇಣುಕಾಚಾರ್ಯರು ಮಹಾನ್ ಚೇತನ್ಯದ ಗುರುವಾಗಿ ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದಾರೆ. ಅವರ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ ಅಂಬರೀಶ್ ಜಿ.ಕೆ. ಹೇಳಿದರು.
ತಾಲೂಕು ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಆಯೋಜಿಸಿದ್ದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೂಜ್ಯ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬೆಣ್ಣೆಹಳ್ಳಿ ಹಿರೇಮಠದ ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ ಉಪನ್ಯಾಸ ನೀಡಿದರು. ಕಟ್ಟಿಮನಿ ಹಿರೇಮಠದ ಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ತಾಲೂಕು ಜಂಗಮ ಸಮಾಜದ ಅಧ್ಯಕ್ಷ ಅಡಿಕಿ ಮಂಜುನಾಥ, ಅಯ್ಯನಹಳ್ಳಿ ಕೊಟ್ರಯ್ಯ, ಎಂಎಂಜೆ ಮೂಗಣ್ಣ, ಕೆ.ಎಂ. ಮಲ್ಲಿಕಾರ್ಜುನ, ಆಟವಾಳಿಗೆ ಭೋಜರಾಜ, ಶಿರಸ್ತೇದಾರ್ ಅನ್ನದಾನೇಶ ಪತ್ತಾರ, ಚಂದ್ರ ನಾಯ್ಕ, ಕಂದಾಯ ನಿರೀಕ್ಷಕ ಡಿ. ಶಿವಕುಮಾರ, ಗ್ರಾಮ ಆಡಳಿತಾಧಿಕಾರಿ ಹರೀಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.