ಕೂಡ್ಲಿಗಿ/ವಿಜಯನಗರ: ಗುಡೇಕೋಟೆಯಲ್ಲಿ ಸ್ಥಗಿತಗೊಂಡಿದ್ದ ಆಧಾರ್ ಸೇವಾ ಕೇಂದ್ರವನ್ನು ತಹಶೀಲ್ದಾರ್ ಕುಮಾರಿ ನೇತ್ರಾವತಿ ಕೆ.ವಿ. ಅವರು ಪುನರಾರಂಭಿಸಿದ್ದಾರೆ.

ಆಧಾರ್ ಸೇವಾ ಕೇಂದ್ರ ಸ್ಥಗಿತಗೊಂಡಿದ್ದರಿಂದ ಸ್ಥಳೀಯ ಸಾರ್ವಜನಿಕರು ಆಧಾರ್ ಸಂಬಂಧಿತ ಸೇವೆಗಳನ್ನು ಪಡೆಯಲು ತೊಂದರೆ ಅನುಭವಿಸುತ್ತಿದ್ದರು. ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ತಹಶೀಲ್ದಾರ್ ಅವರು ಕೇಂದ್ರವನ್ನು ಪುನರಾರಂಭಿಸಲು ಕ್ರಮ ಕೈಗೊಂಡಿದ್ದಾರೆ.

ಇದರಿಂದ ಗುಡೇಕೋಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಆಧಾರ್‌ಗೆ ಸಂಬಂಧಿಸಿದ ಸೇವೆಗಳನ್ನು ಸ್ಥಳೀಯವಾಗಿಯೇ ಪಡೆಯಲು ಅನುಕೂಲವಾಗಲಿದೆ. ಸಾರ್ವಜನಿಕರಿಗೆ ಅಗತ್ಯ ಸೇವೆಗಳು ಸುಗಮವಾಗಿ ದೊರೆಯುವಂತಾಗಿರುವುದಕ್ಕೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor