×
Ad

ಕೂಡ್ಲಿಗಿ | ವಾಟರ್ ಹೀಟರ್‌ನಿಂದ ವಿದ್ಯುತ್ ಸ್ಪರ್ಶಿಸಿ ಬಾಲಕಿ ಮೃತ್ಯು

Update: 2025-09-17 16:45 IST

ಕೂಡ್ಲಿಗಿ : ವಾಟರ್ ಹೀಟರ್‌ನಿಂದ ವಿದ್ಯುತ್ ಸ್ಪರ್ಶಿಸಿ ಬಾಲಕಿಯೊರ್ವಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ನೀರು ಬಿಸಿ ಮಾಡಲು ಇಟ್ಟಿದ್ದ ವಾಟರ್ ಹೀಟರ್‌ನಿಂದ ವಿದ್ಯುತ್ ಸ್ಪರ್ಶವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಶಾಸಕರ ಭೇಟಿ – ಸಾಂತ್ವನ :

ಘಟನೆಯ ಮಾಹಿತಿ ತಿಳಿದ ಕೂಡಲೇ ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಅವರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮೃತ ಬಾಲಕಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಂತ್ಯ ಸಂಸ್ಕಾರಕ್ಕಾಗಿ ಸಹಾಯಧನ ನೀಡುವುದರ ಜೊತೆಗೆ ಕುಟುಂಬಕ್ಕೆ ಧೈರ್ಯ ತುಂಬಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News