×
Ad

ವಿಜಯನಗರ‌ ಜಿಲ್ಲಾ ಕ್ರೀಡಾಂಗಣ ಪರಿಶೀಲನೆ ನಡೆಸಿದ ಸಚಿವ ಝಮೀರ್‌ ಅಹ್ಮದ್

Update: 2025-05-03 10:30 IST

ವಿಜಯನಗರ : ಮೇ 20 ರಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಸಮಾವೇಶ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಜಿಲ್ಲಾ ಕ್ರೀಡಾಂಗಣ ದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಸಂಸದ ತುಕಾರಾಂ, ಶಾಸಕರಾದ ಹೆಚ್. ಆರ್. ಗವಿಯಪ್ಪ, ಭರತ್ ರೆಡ್ಡಿ, ಜಿ.ಎನ್. ಗಣೇಶ್, ಭೀಮಾನಾಯ್ಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿರಾಜ್ ಶೇಕ್, ವಿಜಯನಗರ ಜಿಲ್ಲಾಧಿಕಾರಿ ಎಮ್. ಎಸ್. ದಿವಾಕರ್, ಪೊಲೀಸ್ ವರಿಷ್ಠಾಧಿಕಾರಿ ಬಿ ಎಲ್ ಶ್ರೀಹರಿಬಾಬು, ಹುಡಾ ಅಧ್ಯಕ್ಷರು ಇಮಾಮ್ ನಿಯಾಜಿ ಉಪಸ್ಥಿತರಿದ್ದರು.

ಪರಿಶೀಲನೆ ನಂತರ ಜಿಲ್ಲಾಧಿಕಾರಿ ಗಳ ಕಛೇರಿಯಲ್ಲಿ ಎರಡೂ ಜಿಲ್ಲೆಗಳ ಶಾಸಕರ ಜೊತೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಸಲಹೆ ಸೂಚನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News