×
Ad

ವಿಜಯನಗರ ಜಿಲ್ಲೆಯಲ್ಲಿ ಎಸ್‌ಐಆರ್‌ಗೆ ವೇಗ: ಶೇ.99.19 ಗಣತಿ ನಮೂನೆಗಳ ವಿತರಣೆ

Update: 2026-07-09 20:00 IST

ವಿಜಯನಗರ (ಹೊಸಪೇಟೆ) : ವಿಜಯನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)-2026 ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಒಟ್ಟು 11,42,732 ಗಣತಿ ನಮೂನೆಗಳ ಪೈಕಿ 11,33,432 (ಶೇ.99.19) ನಮೂನೆಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಕೇವಲ 9,300 ನಮೂನೆಗಳ ವಿತರಣೆ ಮಾತ್ರ ಬಾಕಿಯಿದೆ. ಈಗಾಗಲೇ ಶೇ.94ರಷ್ಟು ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ. ಜೂನ್ 30ರಿಂದ ಆರಂಭಗೊಂಡಿರುವ ಈ ಅಭಿಯಾನ ಜುಲೈ 29ರವರೆಗೆ ಮುಂದುವರಿಯಲಿದೆ.

ವಿತರಿಸಲಾದ ನಮೂನೆಗಳ ಪೈಕಿ 1,78,752 (ಶೇ.15.63) ಅರ್ಜಿಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, 932 ಮತದಾರರು ಸ್ವಯಂ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಪರಿಶೀಲನೆ ವೇಳೆ ಜಿಲ್ಲೆಯಲ್ಲಿ 1,583 ಮೃತ ಮತದಾರರು, 1,000 ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರನ್ನು ಗುರುತಿಸಲಾಗಿದೆ. ಅಲ್ಲದೆ, 400 ಡುಪ್ಲಿಕೇಟ್ ದಾಖಲೆಗಳು ಹಾಗೂ 14 ಸಂಪರ್ಕಕ್ಕೆ ಸಿಗದ ಮತದಾರರನ್ನೂ ಪತ್ತೆಹಚ್ಚಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News