×
Ad

ಡೆಂಗ್ಯೂ ತಡೆಗಟ್ಟುವಿಕೆಯ ಜಾಗೃತಿ ಮೂಡಿಸಲು ‘ರಾಷ್ಟ್ರೀಯ ಡೆಂಗ್ಯೂ ದಿನ’ ಆಚರಣೆ

Update: 2025-05-26 18:45 IST

ವಿಜಯನಗರ(ಹೊಸಪೇಟೆ) : ಡೆಂಗ್ಯೂಗೆ ಯಾವುದೇ ಲಸಿಕೆ ಅಥವಾ ಆಂಟಿ-ವೈರಲ್ ಚಿಕಿತ್ಸಾ ಕ್ರಮವಿಲ್ಲ. ಅದರ ತಡೆಗಟ್ಟುವಿಕೆಯೊಂದೆ ನಮಗಿರುವ ಅತ್ಯುತ್ತಮ ಆಯ್ಕೆಯಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಕ್ರಮ್ ಅಲಿ ಷಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರನಾಯ್ಕ ಮಾತನಾಡಿ, ಹಿಂದಿನ ವರ್ಷದಲ್ಲಿ 314 ಡೆಂಗಿ ಜ್ವರದ ಪ್ರಕರಣಗಳು ಪತ್ತೆಯಾಗಿದ್ದವು. ಯಾವುದೇ ಪ್ರಾಣಹಾನಿ ಆಗಿಲ್ಲ. ಈ ವರ್ಷ ಆರಂಭಿಕವಾಗಿ 14 ಪ್ರಕರಣಗಳು ಪತ್ತೆಯಾಗಿವೆ. ರೋಗಿಗಳು ಆಸ್ಪತ್ರೆಗೆ ದಾಖಲಾಗಿಲ್ಲ. ಡೆಂಗಿ ಜ್ವರ ಸೋಂಕಿತರು ಸುರಕ್ಷಿತವಾಗಿದ್ದಾರೆ ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ ಅವರು ಮಾತನಾಡಿದರು.

ಇದೇ ವೇಳೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಲಾಯಿತು. ಡೆಂಗ್ಯೂ ನಿಯಂತ್ರಣ ಕ್ರಮಗಳ ಕುರಿತು ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು.

ಈ ವೇಳೆ ನಗರಸಭೆ ಆಯುಕ್ತರಾದ ಚಂದ್ರಪ್ಪ, ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ.ಭಾಸ್ಕರ್, ತಾಲೂಕು ಆರೋಗ್ಯ ಅಧಿಕಾರಿ ಡಾ.ವಿನೋದ ಕುಮಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ, ಜಿಲ್ಲಾ ಕುಷ್ಠರೋಗದ ನಿಯಂತ್ರಣಾಧಿಕಾರಿ ಡಾ.ರಾಧಿಕಾ, ಕೀಟಶಾಸ್ತ್ರಜ್ಞೆ ನಂದಾ ಖಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಶ್ರೀಸಪ್ತಗಿರಿ ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News