×
Ad

ತುಂಗಭದ್ರಾ ಅಣೆಕಟ್ಟೆಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

Update: 2024-09-22 15:29 IST

ವಿಜಯನಗರ: ತುಂಗಭದ್ರಾ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಮಧ್ಯಾಹ್ನ 2ರ ಸುಮಾರಿಗೆ ಜಲ ಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್ 13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಣೆಕಟ್ಟೆಗೆ ಆಗಮಿಸಿದ್ದರು. ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ ಅರ್ಪಿಸುತ್ತೇನೆ ಎಂದು ಅವರು ಆ ವೇಳೆ ಹೇಳಿದ್ದರು. ಅದರಂತೆ ಇಂದು ಅವರು ಬಾಗಿನ ಅರ್ಪಿಸಿದರು.

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಝಮೀರ್ ಅಹ್ಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಬೋಸ್ ರಾಜ್, ಶರಣಪ್ರಕಾಶ್ ಪಾಟೀಲ್, ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News