ವಿಜಯನಗರ | ಮೇ 9 ರಂದು 6 ನೇ ತರಗತಿ ಪ್ರವೇಶಾತಿಗೆ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
Update: 2025-05-08 20:18 IST
ವಿಜಯನಗರ(ಹೊಸಪೇಟೆ): 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ 6ನೇ ತರಗತಿ ಪ್ರವೇಶಾತಿಗೆ ಸೇರ್ಪಡೆ ಮಾಡುವ ಅರ್ಹತಾ ಪರೀಕ್ಷೆಗಳು ಮೇ.9 ರಂದು ನಗರದ ದೀಪಾಯನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯುವ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಕೇದ್ರದ ಸುತ್ತಲೂ 200 ಮೀಟರ್ ಆವರಣದಲ್ಲಿ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಮತ್ತು ಗುಂಪುಗಳಿಗೆ ಪ್ರವೇಶವಿರುವುದಿಲ್ಲ ಎಂದು ಆದೇಶಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.